Select Your Language

Notifications

webdunia
webdunia
webdunia
webdunia

ಅಮರಾವತಿ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ

ಅಮರಾವತಿ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ
ಬೆಂಗಳೂರು , ಶುಕ್ರವಾರ, 31 ಆಗಸ್ಟ್ 2018 (19:48 IST)
“ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಕನ್ನಡ, ಪ್ರಾದೇಶಿಕ ಭಾಷಾ ಚಲನಚಿತ್ರಗಳ ಪ್ರದರ್ಶನ ಸಪ್ತಾಹ” ಜನರ ಗಮನ ಸೆಳೆಯುತ್ತಿದೆ. ಇದೇ ವೇಳೆ ಅಮರಾವತಿ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

ಕನ್ನಡ ಚಲನಚಿತ್ರಗಳು ಮನರಂಜನೆಯ ಜೊತೆಗೆ ಸಾಮಾಜಿಕ ಸಂದೇಶಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವಹಿಸಿವೆ. ಇಂತಹ ಚಲನಚಿತ್ರಗಳು ಕನ್ನಡ ಚಿತ್ರರಂಗದಲ್ಲಿ ಇನ್ನಷ್ಟು ಮೂಡಿ ಬರಲಿ ಎಂದು ಬಿ.ಬಿ.ಎಂ.ಪಿ ಸದಸ್ಯ ಆರ್ಯ ಶ್ರೀನಿವಾಸ್ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲಾ ವತಿಯಿಂದ ಕೆಂಗೇರಿಯ ಶ್ರೀ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಆಯೋಜಿಸಲಾಗಿರುವ “ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕøತ ಕನ್ನಡ, ಪ್ರಾದೇಶಿಕ ಭಾಷಾ ಚಲನಚಿತ್ರಗಳ ಪ್ರದರ್ಶನ ಸಪ್ತಾಹ” ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ, “ಅಮರಾವತಿ” ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಾಮಾಜಿಕ ಕಾಳಜಿಯುಳ್ಳ ಸಿನೆಮಾಗಳನ್ನು ಸಾರ್ವಜನಿಕರಿಗೆ ಅದರಲ್ಲೂ ಮಕ್ಕಳಿಗೆ ಪ್ರದರ್ಶಿಸುತ್ತಿರುವುದು ತುಂಬಾ ಸಂತೋಷದ ವಿಷಯವಾಗಿದೆ, ಇದರಿಂದಾಗಿ ಮಕ್ಕಳಿಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡುವಂತಾಗುತ್ತದೆ. ಸಾರ್ವಜನಿಕರು ಚಲನಚಿತ್ರೋತ್ಸವ ಸಪ್ತಾಹದಲ್ಲಿ ಉಚಿತವಾಗಿ ಪ್ರದರ್ಶನವಾಗುವ ಉತ್ತಮ ಚಲನಚಿತ್ರಗಳನ್ನು ವೀಕ್ಷಿಸುವ ಮೂಲಕ ವಾರ್ತಾ ಇಲಾಖೆಯ ಕಾರ್ಯಕ್ರಮಗಳಿಗೆ ಉತ್ತೇಜನ ನೀಡಬೇಕೆಂದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಕಲಬುರಗಿಯಲ್ಲಿ ಶೇ. 64.38 ರಷ್ಟು ಮತದಾನ