Webdunia - Bharat's app for daily news and videos

Install App

ವೀರನಹೊಸಹಳ್ಳಿಯಲ್ಲಿ ದಸರಾ ಗಜಪಯಣಕ್ಕೆ ಚಾಲನೆ

Webdunia
ಶನಿವಾರ, 2 ಸೆಪ್ಟಂಬರ್ 2023 (14:04 IST)
ನಾಡಹಬ್ಬ ಮೈಸೂರು ದಸರಾ 2023ಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಚಿವ ಡಾ.H.C.ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದ್ರು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಅಭಿಮನ್ಯು, ಭೀಮ, ಗೋಪಿ, ಧನಂಜಯ, ವರಲಕ್ಷ್ಮಿ, ಅರ್ಜುನ, ವಿಜಯ, ಮಹೇಂದ್ರ, ಕಂಜನ್ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯಗಳ ಜೊತೆಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದ್ವು. ಸುತ್ತ-ಮುತ್ತಲಿನ ಗ್ರಾಮಗಳ ಮತ್ತು ಹಾಡಿಗಳ ನೂರಾರು ಮಹಿಳೆ ಗಜಪಡೆಗೆ ಪೂರ್ಣಕುಂಭ ಸ್ವಾಗತ ಕೋರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments