Publish Date: Fri, 04 Jan 2019 (16:09 IST)
Updated Date: Fri, 04 Jan 2019 (16:23 IST)
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಕೂಟವು ಎಸ್ಪಿ ಕಛೇರಿಯ ಕವಾಯತ್ ಮೈದಾನದಲ್ಲಿ ಇಂದಿನಿಂದ ಆರಂಭಗೂಂಡಿದೆ.
ಚಾಮರಾಜನಗರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಪೊಲೀಸ್ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಕಾವೇರಿ ಚಾಲನೆ ನೀಡಿದರು.
ದೈನಂದಿನ ಜೀವನದಲ್ಲಿ ದೈಹಿಕವಾಗಿ ದೃಢತೆಯಿಂದ ಆರೋಗ್ಯ ಕಾಪಾಡಲು ಕ್ರೀಡೆಯಲ್ಲಿ ಭಾಗವಹಿಸಬೇಕೆಂದರು.
ಅಲ್ಲದೆ ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಆರೋಪಿಗಳನ್ನ ಪತ್ತೆ ಹಚ್ಚುವಲ್ಲಿ ಚಾಮರಾಜನಗರ ಪೊಲೀಸರು ಯಶಸ್ವಿಯಾಗಿದ್ದಾರೆಂದು ಶ್ಲಾಘನೀಯ ವ್ಯಕ್ತಪಡಿಸಿದರು.