Webdunia - Bharat's app for daily news and videos

Install App

ಬರ ಪರಿಸ್ಥಿತಿ: ಜಿಲ್ಲಾಧಿಕಾರಿಗಳ ಜತೆ ಸಿಎಂ ಸಭೆ

Webdunia
ಮಂಗಳವಾರ, 27 ನವೆಂಬರ್ 2018 (14:36 IST)
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ವಿಪಕ್ಷದ ನಾಯಕರು ದೂರುತ್ತಿರುವ ಬೆನ್ನಲ್ಲೇ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಸಿಎಂ, ಡಿಸಿ ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಲು ಮುಂದಾಗಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ, ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು 100 ತಾಲ್ಲೂಕುಗಳಲ್ಲಿರುವ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುವುದು ಸೇರಿದಂತೆ ಆಡಳಿತಕ್ಕೆ ಸಂಬಂಧಿಸಿದಂತೆ ಹತ್ತು ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ವಿವಿಧ ಇಲಾಖೆಗಳ ಮುಖ್ಯಸ್ಥರ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಬಾರಿ ನೂರಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಬರಪೀಡಿತ ಜಿಲ್ಲೆಗಳಲ್ಲಿ ಸಮಾರೋಪಾದಿಯಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಜನ ಗುಳೆ ಹೋಗದಂತೆ ತಡೆಯಬೇಕು. ಸಮರ್ಪಕ ಕುಡಿಯುವ ನೀರು ಒದಗಿಸಲು ಕೈಗೊಳ್ಳಬೇಕಾದ ಕ್ರಮಗಳು, ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸಲು ಆಗಬೇಕಾಗಿರುವ ಕೆಲಸಗಳು, ರಾಜ್ಯ ಸರ್ಕಾರದ ಯೋಜನೆಗಳ ಪ್ರಗತಿ ಬಗ್ಗೆಯೂ ಮುಖ್ಯಮಂತ್ರಿ ಕುಮಾರಸ್ವಾಮಿ  ಸಭೆಯಲ್ಲಿ ಚರ್ಚೆ ನಡೆಸುವರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಪಾಲ್ಗೊಳ್ಳುವರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments