Publish Date: Tue, 23 May 2017 (16:34 IST)
Updated Date: Tue, 23 May 2017 (16:37 IST)
ಬರಪ್ರವಾಸ ಚುನಾವಣೆ ಗಿಮಿಕ್ ಎನ್ನುವವರು ಮೂರ್ಖರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗದಗನ ಅಂಬೇಡ್ಕರ್ ಭವನದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಆದರೆ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬರಗಾಲವೇ ಇಲ್ಲ ಎನ್ನುತ್ತಾ ತಿರುಕನ ಹೇಳಿಕೆ ನೀಡುತ್ತಿದ್ದಾರೆ ಎಂದು ಗುಡುಗಿದರು.
ಮಹಾದಾಯಿ ಯೋಜನೆಗಾಗಿ ಸುದೀರ್ಘ ಹೋರಾಟ ಮಾಡಿದ್ದೇನೆ. ನಾನು ಸಿಎಂ ಆಗಿದ್ದಾಗ ಮಹದಾಯಿ ಯೋಜನೆಗೆ ಹಣ ಬಿಡುಗಡೆ ಮಾಡಿದ್ದೆ. ಗೋವಾ, ಮಹಾರಾಷ್ಟ್ರ ಸಿಎಂಗಳ ಮನವೊಲಿಸಿ ನೀರು ಹರಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದ್ದಾರೆ.
ಬರಗಾಲದಿಂದ ತತ್ತರಿಸಿರುವ ರೈತರ ಗ್ರಾಮಗಳಲ್ಲಿರುವ ಕೆರೆಗಳ ಹೂಳೆತ್ತಿ ಮುಂದೆ ಮಳೆಗಾಲದಲ್ಲಿ ನೀರು ಸಂಗ್ರಹಿಸುವ ಕಾರ್ಯ ಸರಕಾರ ಮಾಡಬೇಕಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಸರಕಾರ ಜನವಿರೋಧಿ, ರೈತ ವಿರೋಧಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.