Publish Date: Tue, 28 Dec 2021 (18:12 IST)
Updated Date: Tue, 28 Dec 2021 (18:31 IST)
ಎಚ್‌ಆರ್‌ಬಿಆರ್ ಬಡಾವಣೆಯಲ್ಲಿ ಸಾರ್ವಜನಿಕರಿಗೆ ಚರಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಡ್ರಗ್ ಪೆಡ್ಲರ್‌ನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ. ಜಾರ್ಜ್ ಮ್ಯಾಥ್ಯೂ ಬಂಧಿತ ಆರೋಪಿ. ಈತನಿಂದ 5.8 ಲಕ್ಷ ರೂ. ಮೌಲ್ಯದ ಚರಸ್ ಮತ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ.
ಹಿಮಾಚಲ ಪ್ರದೇಶದಿಂದ ಈತ ಮಾದಕ ವಸ್ತುವನ್ನು ತರಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಹೋಟೆಲ್‌ನಲ್ಲಿ ತಂಗುವ ಗಿರಾಕಿಗಳಿಗೆ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಈತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಪೊಲೀಸರು ದಾಳಿ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಬಳಿಯಿದ್ದ ಮೊಬೈಲ್ ವಶಪಡಿಸಿಕೊಂಡಿದ್ದು, ಮ್ಯಾಥ್ಯೂನಿಂದ ಡ್ರಗ್ ತರಿಸಿಕೊಂಡವರ ವಿವರ ಪಡೆದು ತನಿಖೆ ನಡೆಸಲಾಗುತ್ತಿದೆ.