Publish Date: Sat, 12 Sep 2020 (23:27 IST)
Updated Date: Sat, 12 Sep 2020 (23:28 IST)
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಮಾಫಿಯಾ ಸದ್ದು ಜೋರಾಗಿದ್ದು, ಇದೀಗ ಕೆಲವು ರಾಜಕಾರಣಿಗಳನ್ನು ಸುತ್ತಿಕೊಳ್ಳುತ್ತಿದೆ.
ಡ್ರಗ್ಸ್ ಜಾಲದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಖಡಕ್ ಮಾತು ಹೇಳಿದ್ದಾರೆ.
ಡ್ರಗ್ಸ್ ಮಾಫಿಯಾದಲ್ಲಿ ಎಂಥವರೇ ಇರಲಿ, ಯಾರೇ ಇರಲಿ, ಅವರ ವಿರುದ್ಧ ಕಠಿಣ ಕ್ರಮಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಡ್ರಗ್ಸ್ ಮಾಫಿಯಾ ಸಮಾಜಕ್ಕೆ ಮಾರಕವಾಗಿದೆ. ಡ್ರಗ್ಸ್ ಮಾಫಿಯಾಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂದಿದ್ದಾರೆ.