Publish Date: Sun, 24 Dec 2023 (17:23 IST)
Updated Date: Sun, 24 Dec 2023 (17:28 IST)
ಹೊಸ ವರ್ಷಾಚರಣೆಯ ಕೆಲ ಪಾರ್ಟಿಗಳಿಗೆ ಪೂರೈಸಲು ಸಂಗ್ರಹಿಸಿದ್ದ ₹52. 78 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿರುವ ಸಿಸಿಬಿ ಪೊಲೀಸರು, ವಿದೇಶಿ ಪ್ರಜೆ ಸೇರಿ ಮೂವರನ್ನು ಬಂಧಿಸಿದ್ದಾರೆ.
ಬೇಗೂರು ಹಾಗೂ ಕೋರಮಂಗಲ ಠಾಣೆ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದೆ. ಆಫ್ರಿಕಾ ಪ್ರಜೆ ಹಾಗೂ ಕೇರಳದ ಇಬ್ಬರನ್ನು ಸೆರೆ ಹಿಡಿಯಲಾಗಿದೆ' ಎಂದು ಸಿಸಿಬಿ ಮೂಲಗಳು ಹೇಳಿವೆ. ಡ್ರಗ್ಸ್ ಸಂಗ್ರಹಿಸಿಟ್ಟುಕೊಳ್ಳುತ್ತಿರುವ ಪೆಡ್ಡರ್‌ಗಳು, ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ಯೋಚಿಸುತ್ತಿದ್ದಾರೆ.