Publish Date: Wed, 07 Feb 2018 (11:31 IST)
Updated Date: Wed, 07 Feb 2018 (11:35 IST)
ಕಾರವಾರ : ಕುಡಿದ ಅಮಲಿನಲ್ಲಿ ತಂದೆಯೇ ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸರ್ವೋದಯ ನಗರದಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ತಂದೆ ಅನಿಲ್ ಕಂಠಪೂರ್ತಿ ಕುಡಿದು ಬಂದು ಮಗಳ ಮೇಲೆ ಎರಗಿ ಅವಾಚ್ಯ ಶಬ್ಧದಿಂದ ನಿಂದಿಸಿದಲ್ಲದೆ ಮಗಳ ಮೇಲೆ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದಾನೆ. ಆ ವೇಳೆ ಆತನ ಪತ್ನಿ ಶೈಲಾ ಅವರು ತಡೆದದ್ದಕ್ಕೆ ಆಕೆಯನ್ನು ಮರದ ತುಂಡಿನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ.
ಶೈಲಾ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ನಂತರ ಪತಿ ಅನಿಲ್ ಮನೆಯಿಂದ ಹೊರನಡೆದಿದ್ದಾನೆ. ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ