Select Your Language

Notifications

webdunia
webdunia
webdunia
webdunia

ಕುಡಿದ ಮತ್ತಿನಲ್ಲಿ ಮೆಟ್ರೋದಲ್ಲಿ ಮಹಿಳಾ ಸಿಬ್ಬಂದಿಯ ನಿಂದನೆ, ಒಬ್ಬ ಅರೆಸ್ಟ್, ಮೂವರು ಎಸ್ಕೇಪ್

Namma Metro, Attack on Metro Staff, Bengaluru

Sampriya

ಬೆಂಗಳೂರು , ಸೋಮವಾರ, 7 ಅಕ್ಟೋಬರ್ 2024 (19:15 IST)
ಬೆಂಗಳೂರು: ಕಂಠ ಪೂರ್ತಿ ಕುಡಿದು  ಮೆಟ್ರೋದಲ್ಲಿ ಪುಂಡಾಟ ಮೆರೆದ ನಾಲ್ವರ ಪೈಕಿ ಪೊಲೀಸರು ಒಬ್ಬನನ್ನು ಬಂಧಿಸಿದ ಘಟನೆ ಇಂದು ನಡೆದಿದೆ.

ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಗಲಾಟೆ ಮಾಡಿದ ಓರ್ವ ವ್ಯಕ್ತಿಯನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ಈ ಘಟನೆ ಭಾನುವಾರ ನಡೆದಿದದೆ. ನಾಲ್ವರು ಕಂಠ ಪೂರ್ತಿ ಕುಡಿದ ಅಮಲಿನಲ್ಲಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಭದ್ರತಾ ಅಧಿಕಾರಿಗಳು ಅವರನ್ನು ತಡೆದಿದ್ದಾರೆ. ಈ ವೇಳೆ ಸಿಬ್ಬಂದಿ ಮೇಲೆ ಇಬ್ಬರು ಹಲ್ಲೆ ನಡೆಸಿದ್ದಾರೆ.

ಅದಲ್ಲದೆ ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿ ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಮೂವರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಬಿಎಮ್‌ಆರ್‌ಸಿಎಲ್‌ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೆನ್ನೈ: ಏರ್‌ ಶೋ ವೇಳೆ ಐವರು ಸಾವು, ಸಂತ್ರಸ್ತರ ಕುಟಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ