Select Your Language

Notifications

webdunia
webdunia
webdunia
webdunia

ಸಬ್ ಅರ್ಬನ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ಕಾರಣ- ಡಿ.ವಿ.ಎಸ್ ಆರೋಪ

ಸಬ್ ಅರ್ಬನ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ಕಾರಣ- ಡಿ.ವಿ.ಎಸ್ ಆರೋಪ
ಬೆಂಗಳೂರು , ಸೋಮವಾರ, 3 ಜೂನ್ 2019 (14:16 IST)
ಬೆಂಗಳೂರು : ಸಬ್ ಅರ್ಬನ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಇಲಾಖೆ ಸಚಿವ ಡಿ.ವಿ ಸದಾನಂದಗೌಡ ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೇಂದ್ರ ರೈಲ್ವೆ ಮಂತ್ರಿಯಾಗಿದ್ದಾಗ ಐದು ವರ್ಷದಿಂದ ನಿರಂತರ ಚರ್ಚೆ ಮಾಡಿ ಕೇಂದ್ರ ಬಜೆಟ್‍ ನಲ್ಲಿಲ್ಲಿ 17 ಸಾವಿರ ಕೋಟಿ ರೂ ಬಿಡುಗಡೆ ಮಾಡಿಸಿದ್ದೆ. ಆದರಂತೆ ಸಬ್ ಅರ್ಬನ್ ರೈಲು ಯೋಜನೆಯ ವೆಚ್ಚದಲ್ಲಿ ಕೇಂದ್ರ – ರಾಜ್ಯಕ್ಕೆ 50:50 ವೆಚ್ಚಕ್ಕೆ ಇಳಿಸಿ ಆರು ಪ್ರಾಥಮಿಕ ರೈಲು ಕೊಟ್ಟು ಯೋಜನೆಯನ್ನು ಆರಂಭ ಮಾಡಿದ್ದೆವು. ಆದರೆ ಈ ಯೋಜನೆ ಇನ್ನೂ ಮುಂದಕ್ಕೆ ಹೋಗಿಲ್ಲ ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.


ಸಬ್ ಅರ್ಬನ್ ಯೋಜನೆಗೆ ಕೇಂದ್ರ ಸರ್ಕಾದಿಂದ ಆಗಬೇಕಾದ ಎಲ್ಲ ಕೆಲಸಗಳನ್ನು ಮಾಡಿಕೊಡಲಾಗಿದೆ. ಆದರೆ ಯೋಜನೆ ಮುಂದಕ್ಕೆ ಹೋಗುತ್ತಿಲ್ಲ. ಈ ಸಂಬಂಧ ನಾನು ಸದ್ಯದಲ್ಲೇ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆಯುತ್ತೇನೆ ಮತ್ತು ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಜೊತೆ ಸೇರಿ ಯೋಜನೆ ಸಂಬಂಧ ಮಾತನಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ಥಳೀಯ ಸಂಸ್ಥೆಗಳ ಚುನಾವಣೆ; ತವರು ಕ್ಷೇತ್ರದಲ್ಲಿ ಬಿಎಸ್ ವೈಗೆ ಮುಖಭಂಗ