ಮುಂಬೈ : ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಪೇದೆಯೊಬ್ಬ ನೋಟುಗಳನ್ನು ಎಸೆದ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ.
ಪ್ರಮೋದ್ ವಾಲ್ಕೆ ಈ ಕೃತ್ಯ ಎಸಗಿದ ಪೇದೆ. ನಾಗ್ಪುರದ ಜಿಲ್ಲಾ ಪರಿಷದ್ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಿಮಿತ್ತ ನಡೆದಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಮೋದ್ ವಾಲ್ಕೆ ನೋಡುತ್ತಿದ್ದರು. ಈ ವೇಳೆ 6ನೇ ತರಗತಿಯ ವಿದ್ಯಾರ್ಥಿನಿಯರು ವೇದಿಕೆಯ ಮೇಲೆ ತುಂಬಾ ಚೆನ್ನಾಗಿ ನೃತ್ಯ ಮಾಡುತ್ತಿದ್ದರು. ತಕ್ಷಣವೇ ವೇದಿಕೆ ಏರಿದ ಪ್ರಮೋದ್ ವಾಲ್ಕೆ ಮಕ್ಕಳ ಮೇಲೆ ನೋಟುಗಳನ್ನು ಹಾಕಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ಅಧಿಕಾರಿಗಳು ಪೇದೆಯನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಆದರೆ ಮಕ್ಕಳನ್ನು ಪ್ರೋತ್ಸಾಹಿಸಲು ಹಣ ಹಾಕಲು ವೇದಿಕೆಯ ಮೇಲೆ ಹತ್ತಲು ಮುಂದಾದವರನ್ನು ತಡೆದು ಹಣವನ್ನು ಸಂಗ್ರಹಿಸಿ, ನಾನೇ ಮಕ್ಕಳ ಮೇಲೆ ಹಾಕಿದ್ದೇನೆ ಎಂದು ಪೇದೆ ಈ ಘಟನೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.