ವಿಭಿನ್ನವಾಗಿ ಈ ಬಾರಿಯ ದಸರಾ ಆಚರಣೆ ಮಾಡಲಾಗಿದೆ.
ಬೆಳಗಾವಿಯ ಹುಕ್ಕೇರಿ ಹಿರೇಮಠದಿಂದ 9 ದಿನಗಳ ಕಾಲ ಹುಕ್ಕೇರಿ ಪಟ್ಟಣದಲ್ಲಿ ನಡೆಯುವ ದಸರಾ ಉತ್ಸವಕ್ಕೆ ಪ್ರವಾಹದಲ್ಲಿ ಸಿಲುಕಿದ್ದ ಸಂತ್ರಸ್ಥರಿಗೆ ಧನ ಸಹಾಯ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ಸಾಮಾಜಿಕ ಕಳಕಳಿಯಿಂದ ಉತ್ತರ ಕರ್ನಾಟಕದ ಪ್ರವಾಹಕ್ಕೆ ಸಿಲುಕಿ ಮನೆಗಳನ್ನ ಕಳೆದುಕೊಂಡ 42 ಗ್ರಾಮಗಳ 120 ಕುಟುಂಬಗಳನ್ನ ಗುರುತಿಸಿ ಆರ್ಥಿಕ ಹಾಗೂ ಬಟ್ಟೆಗಳನ್ನ ನೀಡಿದ್ರು.
ಹುಕ್ಕೇರಿ ಹಿರೇಮಠದಿಂದ ಸಹಾಯ ಮಾಡುವದರ ಮೂಲಕ ಇತರೆ ಮಠಗಳಿಗೂ ದಸರಾ ಉತ್ಸವ ಮಾದರಿಯಾಯಿತು. ಪ್ರವಾಹದ ಹಿನ್ನೆಲೆಯಲ್ಲಿ ಸರಳವಾಗಿ ಈ ಬಾರಿ ದಸರಾ ಉತ್ಸವನ್ನ ಆಚರಣೆ ಮಾಡಲಾಗುತ್ತಿದೆ. ಉತ್ಸವಕ್ಕೆ ಉಮೇಶ ಕತ್ತಿ ಚಾಲನೆ ನೀಡಿದರು.