Webdunia - Bharat's app for daily news and videos

Install App

ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಡಿವಿಎಸ್ ಪತ್ರ ಬರೆದಿದ್ಯಾಕೆ?

Webdunia
ಗುರುವಾರ, 13 ಜೂನ್ 2019 (17:59 IST)
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪತ್ರ ಬರೆದಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಅತಿವೃಷ್ಠಿ ಪರಿಹಾರ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ವಿತರಿಸಿರುವ ಮಾಹಿತಿಯನ್ನು ನೀಡುವಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಪತ್ರ ಬರೆದಿದ್ದಾರೆ.

ಕಳೆದ ವರ್ಷ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಆಗಿರುವ ಅನಾಹುತಗಳಿಗೆ ಸಂಬಂಧಿಸಿದಂತೆ ಜಮೀನು, ಮನೆ ಮತ್ತು ಜಾನುವಾರುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಈಗಾಗಲೇ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ  ಮೂಲಭೂತ ಸೌಕರ್ಯಗಳು ಹಾಗೂ ಮನೆಗಳ ನಿರ್ಮಾಣ ಕಾಮಗಾರಿಗಳ ಪ್ರಗತಿ ಯಾವ ಹಂತದಲ್ಲಿವೆ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿರುವ ಬಗ್ಗೆ ಪೂರ್ಣ ಮಾಹಿತಿಯನ್ನು ಒದಗಿಸುವಂತೆ ಸಿಎಂ‌ ಕುಮಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಕೋರಿದ್ದಾರೆ.

ಅತಿವೃಷ್ಠಿ ಪರಿಹಾರ ಕಾರ್ಯ ಸಂಬಂಧ ಕೇಂದ್ರ ಸರ್ಕಾರದಿಂದ ಪಡೆಯಬಹುದಾದ ಅನುದಾನ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಲು ತಮ್ಮ ಹಂತದಲ್ಲಿ ರಾಜ್ಯದ ಕೇಂದ್ರ ಸಚಿವರ ಸಭೆಯನ್ನು ಕರೆಯಲು ದಿನಾಂಕವನ್ನು ಗೊತ್ತುಪಡಿಸುವ ಮತ್ತೊಮ್ಮೆ ಪತ್ರದ ಮೂಲಕ ಕೋರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments