ಪಾರ್ಟಿ ಮಾಡಿ ಗೆಳೆಯನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಡಿವೈಎಸ್ ಪಿ ಲಕ್ಷ್ಮೀ

Webdunia
ಗುರುವಾರ, 17 ಡಿಸೆಂಬರ್ 2020 (09:26 IST)
ಬೆಂಗಳೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಸಿಐಡಿಯ ಡಿವೈಎಸ್ ಪಿ ಲಕ್ಷ್ಮೀ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ತಮ್ಮ ಗೆಳೆಯನ ಮನೆಯಲ್ಲಿ ರಾತ್ರಿ ಪಾರ್ಟಿ ಮಾಡಿದ್ದ ಲಕ್ಷ್ಮೀ ಬಳಿಕ ಅಲ್ಲಿಯೇ ಕೊಠಡಿಯೊಂದರಲ್ಲಿ ನೇಣು ಹಾಕಿ ಜೀವಕೊನೆಗಾಣಿಸಿದ್ದಾರೆ.


ಇವರ ಆತ್ಮಹತ್ಯೆಯ ಹಿಂದಿನ ಕಾರಣಗಳ ಬಗ್ಗೆ ಈಗ ಭಾರೀ ಚರ್ಚೆಯಾಗುತ್ತಿದೆ. 2012 ರಲ್ಲಿ ನವೀನ್ ಎಂಬಾತನನ್ನು ಮದುವೆಯಾಗಿದ್ದ ಲಕ್ಷ್ಮೀ ಕೆಲವು ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಮದುವೆಯಾಗಿ 8 ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದರಿಂದ ದಂಪತಿ ನಡುವೆ ವೈಮನಸ್ಯವೂ ಇತ್ತು. ಈ ಹಿನ್ನಲೆಯಲ್ಲಿ ಲಕ್ಷ್ಮೀ ಮದ್ಯದ ದಾಸಿಯಾಗಿದ್ದರು. ಇದಕ್ಕೂ ಮೊದಲು ಮದ್ಯ ಸೇವನೆಯಿಂದ ಆರೋಗ್ಯಕ್ಕೆ ತೀವ್ರ ಹಾನಿಯಾಗಿದ್ದರಿಂದ ವೈದ್ಯರು ಎಚ್ಚರಿಕೆಯನ್ನೂ ನೀಡಿದ್ದರು ಎನ್ನಲಾಗಿದೆ.

ಆದರೆ ನಿನ್ನೆ ಅವರು ಗೆಳೆಯರ ಬಳಗದೊಂದಿಗೆ ಮನೋಹರ್ ಎಂಬವರ ಮನೆಯಲ್ಲಿ ಪಾರ್ಟಿ ಮಾಡಿದ್ದು, ಈ ವೇಳೆ ಕಂಠಪೂರ್ತಿ ಮದ್ಯಸೇವಿಸಿದ್ದರು ಎನ್ನಲಾಗಿದೆ. ಬಳಿಕ ವಾಶ್ ರೂಂಗೆ ಹೋಗಿ ಬರುತ್ತೇನೆಂದು ಹೋಗಿದ್ದ ಲಕ್ಷ್ಮೀ ಗೆಳೆಯನ ಮನೆಯ ಕೊಠಡಿಯೊಂದರಲ್ಲಿ ಬಾಗಿಲು ಹಾಕಿಕೊಂಡು ನೇಣಿಗೆ ಶರಣಾಗಿದ್ದಾರೆ. ಅವರು ಎಷ್ಟು ಹೊತ್ತಾದರೂ ಹೊರಗೆ ಬಾರದೇ ಇದ್ದಾಗ ಅನುಮಾನಗೊಂಡ ಗೆಳೆಯರು ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿದ್ದು, ಇದಾದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಲು ಹೇಳಿದ್ದಕ್ಕೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಹೇಗೆ ಬಂದ್ರು ನೋಡಿ Video

ಜಾತಿ ವಿಷ ಬೀಜ ಬಿತ್ತಲು ಹೊರಟ ಸರ್ಕಾರ: ಮಹೇಶ್ ಟೆಂಗಿನಕಾಯಿ

ಕೇರಳದ ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್: ಮೃದು ಸ್ವಭಾವದ ಪ್ರಬಲ ನಾಯಕ

ವಿ ಡಿ ಸತೀಶನ್ ಕೇರಳಂ ನೂತನ ಸಿಎಂ

ಮುಂದಿನ ಸುದ್ದಿ
Show comments