Select Your Language

Notifications

webdunia
webdunia
webdunia
webdunia

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಮುಗಿದ ಅಧ್ಯಾಯ: ಸಿಎಂ ಸಿದ್ದರಾಮಯ್ಯ

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಮುಗಿದ ಅಧ್ಯಾಯ: ಸಿಎಂ ಸಿದ್ದರಾಮಯ್ಯ
ಮಂಗಳೂರು , ಶುಕ್ರವಾರ, 6 ಜನವರಿ 2017 (08:50 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಗಣಪತಿ ಅವರ ತಂದೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಆದರೆ, ಈ ಪ್ರಕರಣ ಮುಗಿದ ಅಧ್ಯಾಯವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತಿಶ್ರೀ ಹಾಡಿದ್ದಾರೆ. 
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಿದ್ದೇವು. ಆದರೆ, ಆರೋಪಗಳಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ತಿಳಿದು ಬಂದಿದೆ. ಈ ಪ್ರಕರಣ ಮುಗಿದ ಅಧ್ಯಾಯ ಎಂದು ಹೇಳಿದರು. 
 
ನಂಜನಗೂಡು ಉಪಚುನಾವಣೆ ಅಭ್ಯರ್ಥಿ ಯಾರು ಎಂದು ಇನ್ನೂ ತೀರ್ಮಾನವಾಗಿಲ್ಲ ಎಂದು ತಿಳಿಸಿದರು. 
 
ಬರ ಪರಿಹಾರಕ್ಕೆ ಒಟ್ಟು 4702 ಕೋಟಿ ರೂಪಾಯಿ ಅನುದಾನ ನೀಡುವಂತೆ ಕೇಂದ್ರ ಸರಕಾರವನ್ನು ಕೇಳಿದ್ದೇವು. ಆದರೆ, ಕೇಂದ್ರ ಸರಕಾರ 1782 ಕೋಟಿ ರೂಪಾಯಿ ಮಂಜೂರು ಮಾಡಿದೆ. ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಿದರೂ ಗಮನವೇ ಹರಿಸಲ್ಲ. ಹೀಗಾಗಿ ಇನ್ನಷ್ಟು ಅನುದಾನ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮಾರುಕಟ್ಟೆಗೆ ಮುನ್ನುಗ್ಗಲಿರುವ ಶಿಯೋಮಿ