Select Your Language

Notifications

webdunia
webdunia
webdunia
webdunia

ದೂರು ನೀಡಲು ಬಂದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್‌ಪಿ

Tumkuru Sexual Assault

Sampriya

ತುಮಕೂರು , ಶುಕ್ರವಾರ, 3 ಜನವರಿ 2025 (18:42 IST)
ತುಮಕೂರು: ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜತೆ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಠಾಣೆಗೆ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದು ವಿಡಿಯೋದಲ್ಲಿ ಸೆರೆಯಾಗಿದೆ.

ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿಯೇ ಈ ಕೃತ್ಯ ನಡೆದಿರುವುದು ಇಡೀ ಪೊಲೀಸ್ ಇಲಾಖೆಯೆ ತಲೆ ತಗ್ಗಿಸುವಂತೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ಡಿವೈಎಸ್‌ಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.

ಈ ಬಗ್ಗೆ ತುಮಕೂರು ಜಿಲ್ಲೆ ಎಸ್‌ಪಿ ಕೆವಿ ಅಶೋಕ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಗೂಂಡಾಗಿರಿ ವಿಪಕ್ಷ ನಾಯಕನ ಕೆಲಸವೇ: ಆರ್ ಅಶೋಕ್‌ ನಡೆಗೆ ಕಾಂಗ್ರೆಸ್ ಆಕ್ರೋಶ