Webdunia - Bharat's app for daily news and videos

Install App

ದೂರು ನೀಡಲು ಬಂದಾಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಡಿವೈಎಸ್‌ಪಿ

Sampriya
ಶುಕ್ರವಾರ, 3 ಜನವರಿ 2025 (18:42 IST)
ತುಮಕೂರು: ದೂರು ನೀಡಲು ಕಚೇರಿಗೆ ಬಂದ ಮಹಿಳೆಯ ಜತೆ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  

ಠಾಣೆಗೆ ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಇದು ವಿಡಿಯೋದಲ್ಲಿ ಸೆರೆಯಾಗಿದೆ.

ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿಯೇ ಈ ಕೃತ್ಯ ನಡೆದಿರುವುದು ಇಡೀ ಪೊಲೀಸ್ ಇಲಾಖೆಯೆ ತಲೆ ತಗ್ಗಿಸುವಂತೆ ಮಾಡಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದ ಹಾಗೇ ಡಿವೈಎಸ್‌ಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ವ್ಯಕ್ತವಾಗಿದೆ.

ಈ ಬಗ್ಗೆ ತುಮಕೂರು ಜಿಲ್ಲೆ ಎಸ್‌ಪಿ ಕೆವಿ ಅಶೋಕ್ ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿ, ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ