Select Your Language

Notifications

webdunia
webdunia
webdunia
webdunia

ಇ.ತುಕಾರಾಂ ರಾಜೀನಾಮೆ ಕೊಡದಿದ್ದರೆ ನಿರಂತರ ಹೋರಾಟ: ಬಂಗಾರು ಹನುಮಂತು

E Tukaram

Krishnaveni K

ಬೆಂಗಳೂರು , ಭಾನುವಾರ, 14 ಜುಲೈ 2024 (13:49 IST)
Photo Credit: Facebook
ಬೆಂಗಳೂರು: ಸಂಸದ ಇ.ತುಕಾರಾಂ ಅವರಿಗೆ ಸಮಾಜದ ಬಗ್ಗೆ ಅಭಿಮಾನ ಮತ್ತು ಕಾಳಜಿ ಇದ್ದರೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಆಗ್ರಹಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇ.ತುಕಾರಾಂ ಅವರು ರಾಜೀನಾಮೆ ಕೊಡದೆ ಇದ್ದಲ್ಲಿ ಎಸ್‍ಟಿ ಮೋರ್ಚಾ ಮತ್ತು ಸಮಾಜದ ವತಿಯಿಂದ ನಿರಂತರ ಹೋರಾಟ ಸಂಘಟಿಸಲಾಗುವುದು ಎಂದು ಇದೇವೇಳೆ ಎಚ್ಚರಿಸಿದರು.

ವಾಲ್ಮೀಕಿ ನಿಗಮದ ಹಗರಣದ ಮೂಲಕ ಕಬಳಿಸಿದ ಸುಮಾರು 30ರಿಂದ 40 ಕೋಟಿ ಹಣವನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಳಸಿದ್ದು ಇ.ಡಿ. ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವಿವರಿಸಿದರು. ವಾಲ್ಮೀಕಿ ನಿಗಮದ ಹಣವನ್ನು ಅಕ್ರಮವಾಗಿ ಕಬಳಿಸಿ ಇವರ ಚುನಾವಣೆಗೆ ಬಳಸಿದ್ದಾರೆ ಎಂದೂ ಅವರು ಟೀಕಿಸಿದರು. ಇ.ತುಕಾರಾಂ ಅವರು ಮನೆಗಳಿಗೆ ಹಣ ಹಂಚಿದ್ದು, ಚುನಾವಣೆಗೆ 50ರಿಂದ 60 ಕೋಟಿ ಖರ್ಚು ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಲೋಕಸಭಾ ಚುನಾವಣಾ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುವಂತೆ ಆಯಾ ಜಿಲ್ಲೆಗಳ ಸಚಿವರಿಗೆ ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್‍ನಂತೆ ಆಗಿನ ಸಚಿವ ನಾಗೇಂದ್ರ ಅವರು ನಿಗಮದ ಹಣವನ್ನು ಚುನಾವಣೆಗೆ ಬಳಸಿದ್ದಾರೆ ಎಂದು ಅವರು ತಿಳಿಸಿದರು.
ಎಸ್‍ಟಿ ಮೋರ್ಚಾ ವತಿಯಿಂದ ಈ ಅಕ್ರಮದ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಅವರು ಪ್ರಕಟಿಸಿದರು. ನಿಗಮದ ಅಧ್ಯಕ್ಷ ಬಸವರಾಜ ದದ್ದಲ್ ಅವರು ನಾನೇನೂ ತಪ್ಪು ಮಾಡಿಲ್ಲ ಎಂದು ಸುಳ್ಳು ಹೇಳುತ್ತಿದ್ದರು. ಈಗ ಅವರು ಎಸ್‍ಐಟಿ ಮುಂದೆ ಶರಣಾಗಿದ್ದಾರೆ. ಆದರೂ, ಸಿದ್ದರಾಮಯ್ಯನವರು, ಡಿ.ಕೆ.ಶಿವಕುಮಾರ್ ಅವರು ದದ್ದಲ್ ಅವರ ರಾಜೀನಾಮೆ ಪಡೆದಿಲ್ಲ. ಪಕ್ಷಕ್ಕೆ ಮುಜುಗರ ಆಗುವುದೆಂದು ರಾಜೀನಾಮೆ ಪಡೆದಿಲ್ಲ ಎಂದು ಟೀಕಿಸಿದರು.

ಇದೊಂದು ಭಂಡ ಸರಕಾರ; ಇವರು ಭ್ರಷ್ಟ ಮುಖ್ಯಮಂತ್ರಿ ಎಂದು ಟೀಕಿಸಿದ ಅವರು, ದದ್ದಲ್ ಅವರ ಕುಟುಂಬ ಕೋಟಿಗಟ್ಟಲೆ ಹಣದ ಅಕ್ರಮ ಆಸ್ತಿ ಖರೀದಿ ಮಾಡಿದೆ. ಮುಖ್ಯಮಂತ್ರಿಗಳು ದದ್ದಲ್ ರಾಜೀನಾಮೆ ರಾಜೀನಾಮೆ ಪಡೆಯಬೇಕಲ್ಲದೆ, ತಾವು ಕೂಡ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.
 
 
                                          
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಶಕ್ತಿಯೋಜನೆಯ ನಷ್ಟ ತುಂಬಿಸಲು ಬಸ್ ದರ ಏರಿಕೆ