Webdunia - Bharat's app for daily news and videos

Install App

ಆಳಂದ ಪಟ್ಟಣದಲ್ಲಿ ಪೊಲೀಸರ ಹದ್ದಿನ ಕಣ್ಣು

Webdunia
ಶುಕ್ರವಾರ, 17 ಫೆಬ್ರವರಿ 2023 (19:42 IST)
ಆಳಂದ ಪಟ್ಟಣದ ಲಾಡ್ಲೇ ಮಶಾಕ್ ದುರ್ಗಾದಲ್ಲಿರೋ ಶಿವಲಿಂಗಕ್ಕೆ ಶಿವರಾತ್ರಿಯಂದು ಶಿವಲಿಂಗ ಪೂಜೆಗೆ ಕೋರ್ಟ್ ಸಮ್ಮತಿ ನೀಡಿದೆ. ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ಸಿಕ್ಕ ಹಿನ್ನೆಲೆ ಕಲಬುರಗಿಯ ಆಳಂದ ಪಟ್ಟಣದಲ್ಲಿ ಬಿಗಿ ಪೊಲೀಸ್​ ಭದ್ರತೆ ಏರ್ಪಡಿಸಲಾಗಿದೆ. ADGP ಅಲೋಕ್‌ ಕುಮಾರ್ ನೇತೃತ್ವದಲ್ಲಿ ರೂಟ್ ಮಾರ್ಚ್ ಸಿದ್ದವಾಗಿದ್ದು, ಸುಮಾರು 500ಕ್ಕೂ ಹೆಚ್ಚು ಪೊಲೀಸರಿಂದ ರೂಟ್ ಮಾರ್ಚ್‌ ನಡೆಯಲಿದೆ. ಶಿವಲಿಂಗ ಪೂಜೆಗೆ 15 ಜನರಿಗೆ ಕೋರ್ಟ್​ ಅವಕಾಶ ನೀಡಿದ್ದು, ಶಿವರಾತ್ರಿಯಂದು ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಕೈಗೊಳ್ಳಲಾಗಿದೆ. ಕಳೆದ ವರ್ಷ ಶಿವರಾತ್ರಿಯಂದು ಕೇಂದ್ರ ಸಚಿವ ಭಗವಂತ ಖೂಬಾ ಹಾಗೂ ಡಿಸಿ ಕಾರಿನ ಮೇಲೆ ಲಾಡ್ಲೇ ಮಾಶಾಕ್ ದರ್ಗಾದಲ್ಲಿ ಕೆಲ ಮುಸ್ಲಿಮರಿಂದ ಕಲ್ಲು ತೂರಾಟ ನಡೆದಿದ್ದು, ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments