ಕಲಬುರಗಿ ಜಿಲ್ಲೆಯಲ್ಲಿ ಮತ್ತೆ ಭೂಕಂಪನ

Webdunia
ಗುರುವಾರ, 1 ಸೆಪ್ಟಂಬರ್ 2022 (21:08 IST)
ಕಲಬುರಗಿ ಜಿಲ್ಲೆಯಲ್ಲಿ ಜನರಿಗೆ ಮತ್ತೆ ಭೂಕಂಪನ ಹಾಗೂ ವಿಚಿತ್ರ ಸದ್ದು ಕೇಳಿಬಂದ ಅನುಭವವಾಗಿದೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಅನೇಕ ಗ್ರಾಮಗಳಲ್ಲಿ ಜನ ಮನೆಯಿಂದ ಹೊರಗೋಡಿ ಬಂದು ರಾತ್ರಿ ಜಾಗರಣೆಯನ್ನೇ ಮಾಡಿದ್ದಾರೆ. ಚಿಂಚೋಳಿ ತಾಲೂಕಿನ ಸುಲೇಪೇಟ್, ಚಿಮ್ಮಾಇದ್ಲಾಯಿ, ದಸ್ತಾಪುರ, ನೀಮಾಹೊಸಹಳ್ಳಿ, ಗಡಿಕೇಶ್ವರ, ಅಣವಾರ, ಗೌಡನಹಳ್ಳಿ, ಇಂದ್ರಪಾಡ ಹೊಸಳ್ಳಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಘಟನೆ ನಡೆದಿದೆ. ಬೆಚ್ಚಿಬಿದ್ದ ಗ್ರಾಮಸ್ಥರು ಮನೆಯಿಂದ ಹೊರಬಂದು ಕಟ್ಟೆಗಳ ಮೇಲೆ, ಬಯಲು ಪ್ರದೇಶದಲ್ಲಿ ಆಶ್ರಯ ಪಡೆದರು.ಕಳೆದ ಮೂರ್ನಾಲ್ಕು ವರ್ಷಗಳಿಂದ ಚಿಂಚೋಳಿ ತಾಲೂಕಿನ‌ ಹಲವೆಡೆ ಭೂಮಿಯಿಂದ  ಸ್ಪೋಟದ ಸದ್ದು ಕೇಳಿ ಬರುತ್ತಿದೆ. ಗಡಿಕೇಶ್ವರ ಸುತ್ತಲಿನ ಹಳ್ಳಿಗಳಲ್ಲೂ ಭೂಕಂಪನವಾಗಿದೆ. ಇಲ್ಲಿಯೂ ಮನೆಗಳಲ್ಲಿ‌ ಮಲಗಿದ್ದ ಜನರು ಹೊರಗಡೆ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments