Select Your Language

Notifications

webdunia
webdunia
webdunia
webdunia

ಕಲಬುರಗಿಯಲ್ಲಿ ಕಂಪಿಸಿದ ಭೂಮಿ, ಸಚಿವ ಪ್ರಿಯಾಂಕ್ ಖರ್ಗೆ ಹಂಚಿಕೊಂಡ್ರು ಪೋಸ್ಟ್‌

ಕಲಬುರ್ಗಿ ಭೂಕಂಪ
ಬೆಂಗಳೂರು: ಕಲಬುರಗಿಯಲ್ಲಿ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ‌ ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಹೇಳಿದೆ. 

ಕೆಎಸ್‌ಎನ್‌ಡಿಎಂಸಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಆಳಂದ್ ತಾಲ್ಲೂಕಿನ ಆಲೂರಿನಲ್ಲಿರುವ ಜವಾಲ್ಗಾ ಗ್ರಾಮದ ಆಗ್ನೇಯಕ್ಕೆ 0.5 ಕಿ.ಮೀ ದೂರದಲ್ಲಿರುವ ಭೂಕಂಪದ ಕೇಂದ್ರದಿಂದ 20-25 ಕಿ.ಮೀ ರೇಡಿಯಲ್ ದೂರದವರೆಗೆ ಕಂಪನದ ಅನುಭವವಾಗಬಹುದು. 

ಕಡಿಮೆ ತೀವ್ರತೆಯ ಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿ ಉಂಟುಮಾಡುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಈ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 8:17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿರುತ್ತದೆ.

ಈ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ  ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ  ನಿರಂತರವಾಗಿ ಸಂಪರ್ಕದಲ್ಲಿದ್ದು, ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು, ಸಾರ್ವಜನಿಕರು ಹಾಗೂ ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ವಿನಂತಿಸುತ್ತೇನೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಿದ್ದು: ಡಿಕೆ ಶಿವಕುಮಾರ್‌