Publish Date: Fri, 26 Nov 2021 (17:27 IST)
Updated Date: Fri, 26 Nov 2021 (19:30 IST)
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಯಂಕರ ಶಬ್ಧದೊಂದಿಗೆ ಸಂಭವಿಸಿದ ಭೂಕಂಪನ ಅನುಭವ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ಭೂಕಂಪನದ ಯಾವುದೇ ಲಕ್ಷಣಗಳು ದಾಖಲಾಗಿಲ್ಲ ಎಂದು ತಿಳಿಸಿದೆ.ಇಂದು ಮಧ್ಯಾಹ್ನ ಬೆಂಗಳೂರಿನ ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ, ರಾಮನಗರ, ಚೆನ್ನಪಟ್ಟಣ ಭಾಗಗಳಲ್ಲಿ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿತ್ತು. ಮೊದಲ ಬಾರಿಗೆ ಲಘುವಾಗಿ, ನಂತರ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದಂತಾಗಿತ್ತು.