Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ ಈಶ್ವರಪ್ಪ

ಯಡಿಯೂರಪ್ಪ ವಿರುದ್ಧ ಅಸಮಾಧಾನ ಹೊರಹಾಕಿದ ಈಶ್ವರಪ್ಪ
ಬೆಂಗಳೂರು , ಗುರುವಾರ, 20 ಏಪ್ರಿಲ್ 2017 (19:31 IST)
ಬಿಜೆಪಿಯಲ್ಲಿ ಕೆಲವರಿಗೆ ತುಂಬಾ ನೋವು ಕಾಡುತ್ತಿದೆ ಎಂದು ಯಡಿಯೂರಪ್ಪ ವಿರುದ್ಧ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ. 
 
ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಗೆ ನಾಲ್ವರು ಸದಸ್ಯರ ಸಮಿತಿ ರಚಿಸಲಾಗಿತ್ತು. ಆದರೆ, ಸಮಿತಿ ಒಂದು ಬಾರಿಯೂ ಸಭೆ ನಡೆಸಿ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಏಪ್ರಿಲ್ 27 ರಂದು ಸಭೆ ಕರೆದಿದ್ದಾರೆ. ಪಕ್ಷವನ್ನು ಉಳಿಸಲು ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಅವರು ಕರೆದರೆ ನಾನು ಸಭೆಗೆ ಹೋಗುತ್ತೇನೆ. ನಾನು ಯಾರಿಗೂ ಹೆದರಲ್ಲ ಎಂದು ಗುಡುಗಿದ್ದಾರೆ.
 
ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪದಾಧಿಕಾರಿಗಳ ಪಟ್ಟಿಯನ್ನು ಪರಿಷ್ಕರಿಸುವಂತೆ ಸಲಹೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ಪದಾಧಿಕಾರಿಗಳ ಪಟ್ಟಿ ಪರಿಷ್ಕರಣೆಯಾಗಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅಸಮಾಧಾನ ಹೊರಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಭಾರಿ ಮಳೆಗೆ ಸಿಲುಕಿದ ಸಚಿವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್