Webdunia - Bharat's app for daily news and videos

Install App

ಅಮಿತ್ ಶಾ ಆದೇಶಗಳನ್ನು ಯಡಿಯೂರಪ್ಪ ಪಾಲಿಸುತ್ತಿಲ್ಲ: ಈಶ್ವರಪ್ಪ ಆಕ್ರೋಶ

Webdunia
ಶನಿವಾರ, 4 ಮಾರ್ಚ್ 2017 (13:03 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೀಡಿದ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ. 
 
ಪಕ್ಷದಲ್ಲಿ ಕೆಲವರಿಗೆ ನೀಡಿರುವ ನೋಟಿಸ್, ಅಮಾನತುಗಳನ್ನು ಹಿಂದಕ್ಕೆ ಪಡೆಯುವುದು, ನೂತನ ಜಿಲ್ಲಾಧ್ಯಕ್ಷರ ನೇಮಕ ಕುರಿತಂತೆ ಯಡಿಯೂರಪ್ಪ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು.ಇದೇ ಸಂದರ್ಭದಲ್ಲಿ ರಾಯಣ್ಣ ಬ್ರಿಗೇಡ್ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಘೋಷಿಸಿದರು.
 
ಬ್ರಿಗೇಡ್‌ಗೂ, ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಬೀದರ್ ಕಲಬುರಗಿಯಲ್ಲಿ ಸಮಾವೇಶ ಮಾಡಿದ್ದೇವೆ. ಬಿಜೆಪಿಯಲ್ಲಿ ಅಸಮಾಧಾನ ಗೊಂದಲವಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ.
 
ನಿನ್ನೆ ಸೊಗಡು ಶಿವಣ್ಣ ನಿವಾಸದಲ್ಲಿ ಅತೃಪ್ತ ನಾಯಕರ ಸಭೆ ನಡೆದಿರುವುದು ಸತ್ಯ. ಲಿಂಗಾಯುತ ಸಮುದಾಯದ ಎರಡನೇ ಹಂತದ ನಾಯಕರ ಸಭೆ ನಡೆದಿದೆ. ಸಭೆಯಲ್ಲಿ ಯಡಿಯೂರಪ್ಪನವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
 
ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ಫೆಬ್ರವರಿ 10 ರೊಳಗೆ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ಯಡಿಯೂರಪ್ಪನವರಿಗೆ ಸೂಚಿಸಿದ್ದರು. ಆದರೆ, ಇಲ್ಲಿಯವರೆಗೆ ಅವರು ಯಾವುದೇ ಸಭೆ ನಡೆಸಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.
 
ಶೀಘ್ರದಲ್ಲಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments