Select Your Language

Notifications

webdunia
webdunia
webdunia
webdunia

ಮದುವೆ ಊಟ ಸೇವಿಸಿ ಸಾಕಷ್ಟು ಅಸ್ವಸ್ಥ !

ಮದುವೆ ಊಟ ಸೇವಿಸಿ ಸಾಕಷ್ಟು ಅಸ್ವಸ್ಥ !
ಶಿವಮೊಗ್ಗ , ಭಾನುವಾರ, 8 ಮೇ 2022 (11:16 IST)
ಶಿವಮೊಗ್ಗ : ಮದುವೆ ಸಮಾರಂಭದಲ್ಲಿ ಆಹಾರ ಸೇವಿಸಿದ್ದ 85ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾದ ಪರಿಣಾಮ ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದ ಗೆಜ್ಜೇನಹಳ್ಳಿಯಲ್ಲಿ ಶುಕ್ರವಾರ ಮದುವೆ ಸಮಾರಂಭ ನಡೆದಿತ್ತು. ಈ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ಊಟ ಮಾಡಿದ್ದರು.

ಊಟ ಮಾಡಿದ್ದ ಮಕ್ಕಳು ಸೇರಿದಂತೆ ಕೆಲವರಿಗೆ ವಾಂತಿ, ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಅಸ್ವಸ್ಥಗೊಂಡವರನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಪಠ್ಯಕ್ರಮಗಳಲ್ಲಿ ‘ಸೈಬರ್ ಸುರಕ್ಷತೆ’ ಅಧ್ಯಯನ