Publish Date: Sat, 20 May 2017 (15:23 IST)
Updated Date: Sat, 20 May 2017 (15:25 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ದಲಿತರ ಮನೆಯಲ್ಲಿ ಉಪಹಾರ ಮಾಡುವ ಸಂದರ್ಭದಲ್ಲಿ ಖಾಸಗಿ ಹೋಟೆಲ್‌ನಿಂದ ತಿಂಡಿ ತರಿಸಲಾಗಿತ್ತು ಎನ್ನುವ ವರದಿಗಳ ಹಿನ್ನೆಲೆಯಲ್ಲಿ ದಲಿತರಿಗೆ ಅಪಮಾನ ಮಾಡಲಾಗಿದೆ ಎಂದು ಬೆಳ್ಳೂರಿನ ನಿವಾಸಿ ಡಿ.ವೆಂಕಟೇಶ್ ಎನ್ನುವವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರಿಗೆ ದೂರು ನೀಡಿದ್ದಾರೆ.
ದಲಿತರ ಬಗ್ಗೆ ತಪ್ಪು ಸಂದೇಶ ರವಾನಿಸಿದ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಡಿ.ವೆಂಕಟೇಶ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.