Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

CM Siddaramaiah

Sampriya

ಬೆಂಗಳೂರು , ಸೋಮವಾರ, 6 ಅಕ್ಟೋಬರ್ 2025 (18:50 IST)
Photo Credit X
ಬೆಂಗಳೂರು: ವಿಧಾನಸೌಧದಲ್ಲಿಂದು 68 ಪರಿಸರ ಸ್ನೇಹಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಬಳಿಕ ಪರಿಸರ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಲಾಂಛನ ಬಿಡುಗಡೆ ಮಾಡಿದರು.

ಇನ್ನೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿಎಂ ನರೇಂದ್ರ ಸ್ವಾಮಿ ಅವರು ಮಾತನಾಡಿ, ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಓಡಾಡಲು ಪರಿಸರ ಸ್ನೇಹಿ ವಿದ್ಯುತ್ ಚಾಲಿತ ಕಾರನ್ನು ಒದಗಿಸುವುದಾಗಿ ಹೇಳಿದರು. 

ಇದಾದ ಬಳಿಕ ಅರಣ್ಉ ಸಚಿವ ಈಶ್ವರ್ ಖಂಡ್ರೆಯವರಿಗೆ ಇವಿ ಕಾರು ನೀಡಲಾಗುವುದು ಎಂದರು. ಮುಂದೆ ಹಂತಹಂತವಾಗಿ ಎಲ್ಲ ಸಚಿವರು, ಅಧಿಕಾರಿಗಳೂ ಇವಿ ಕಾರುಗಳಲ್ಲಿಯೇ ಓಡಾಡುವಂತೆ ಮಾಡುವುದು ನಮ್ಮ ಉದ್ದೇಶ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ, ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವ ಬಿ.ಝೆಡ್‌. ಜಮೀರ್ ಅಹಮದ್‌ಖಾನ್‌, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ