Select Your Language

Notifications

webdunia
webdunia
webdunia
webdunia

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Satish Jarakiholi
ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್‌ ಕಾಲೋನಿ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿ ಶೋಧ ಕಾರ್ಯ ಆರಂಭಿಸಿದ್ದಾರೆ. ಬೆಳಗ್ಗಿನ ಜಾವವೇ ಸಿಆರ್‌ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ಆಗಮಿಸಿದ ಇ.ಡಿ ತಂಡಗಳು ಕಾರ್ಯಾಚರಣೆಗೆ ಇಳಿದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
 
18ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ: ಬೆಂಗಳೂರು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಸಚಿವರಿಗೆ ಹಾಗೂ ಅವರ ಆಪ್ತರಿಗೆ ಸಂಬಂಧಿಸಿದ ಒಟ್ಟು 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
 
ಮಗಳ ನಿವಾಸದ ಮೇಲೆಯೂ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಅವರ ಮಗಳು ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆಯೂ ಇ.ಡಿ ಪರಿಶೀಲನೆ ನಡೆಸುತ್ತಿದೆ.
 
ಇ.ಡಿ ಅಧಿಕಾರಿಗಳು ಈ ಪ್ರಕರಣದ ಬಗ್ಗೆ ಅಧಿಕೃತ ತನಿಖೆಯ ಪೂರ್ಣ ವಿವರಗಳನ್ನು ನೀಡಬೇಕಿದ್ದರೂ, ಪ್ರಾಥಮಿಕ ವರದಿಗಳ ಪ್ರಕಾರ ಕೆಳಗಿನ ಪ್ರಮುಖ ಕಾರಣಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
 
ಅಕ್ರಮ ಹಣ ಅಕ್ರಮ ವರ್ಗಾವಣೆ: ವಿದೇಶಗಳಿಗೆ ಅಕ್ರಮವಾಗಿ ಹಣ ರವಾನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ಶೋಧ ನಡೆಸಲಾಗುತ್ತಿದೆ.
 
ಆಪ್ತರ ಹಾಗೂ ಸಂಬಂಧಿಕರ ಲಿಂಕ್: ಇತ್ತೀಚೆಗೆ ಸಚಿವರ ಭಾವಮೈದುನ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ಬೆಳಗಾವಿಯ ನಿವಾಸ ಮತ್ತು ಸಚಿವರ ಆಪ್ತರ ಸ್ಥಳಗಳಲ್ಲಿ ನಡೆದ ದಾಳಿಗಳ ಮುಂದುವರಿದ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.
 
ಬಾರ್‌ ಲೈಸೆನ್ಸ್‌ ಹಾಗೂ ಹಣಕಾಸು ವ್ಯವಹಾರ: ಅಬಕಾರಿ ಇಲಾಖೆಗೆ ಸಂಬಂಧಿಸಿದ ಲೈಸೆನ್ಸ್ ನಿಯಮಾವಳಿಗಳ ಉಲ್ಲಂಘನೆ ಹಾಗೂ ಅದಕ್ಕೆ ಸಂಬಂಧಿಸಿದ ಹಣಕಾಸಿನ ವಹಿವಾಟುಗಳ ಕುರಿತು ಶಂಕೆ ವ್ಯಕ್ತವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ