Select Your Language

Notifications

webdunia
webdunia
webdunia
webdunia

ಶಂಕಿತ ಉಗ್ರರ ಮನೆಯಲ್ಲಿ ED ಶೋಧ

ಶಂಕಿತ ಉಗ್ರರ ಮನೆಯಲ್ಲಿ ED ಶೋಧ
ಶಿವಮೊಗ್ಗ , ಬುಧವಾರ, 11 ಜನವರಿ 2023 (20:18 IST)
ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಮೂವರು ಶಂಕಿತ ಉಗ್ರರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ. 5 ಕಾರುಗಳಲ್ಲಿ ಬಂದಿರುವ ಸುಮಾರು 15ಕ್ಕೂ ಹೆಚ್ಚು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೂವರು ಶಂಕಿತ ಉಗ್ರರ ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಾಜ್ ಮುನೀರ್, ಶಾರೀಕ್ ಮನೆ ಸೇರಿದಂತೆ ಅಕ್ಕಪಕ್ಕದ ಮನೆಗಳಿಗೂ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ. ಪ್ರತಿ ಮನೆಗೂ ತೆರಳಿರುವ ಅಧಿಕಾರಿಗಳ ತಂಡ, ಮೊಬೈಲ್‌ ಸ್ವಿಚ್ ಆಫ್ ಮಾಡುವಂತೆ ಹೇಳಿದ್ದಲ್ಲದೆ ಯಾರೂ ಫೋಟೋ ತೆಗೆಯದಂತೆ ಸೂಚನೆ ನೀಡಿದ್ದಾರೆ. ಶಸ್ತ್ರ ಸಜ್ಜಿತ ಪೊಲೀಸರನ್ನು ತಮ್ಮೊಂದಿಗೆ ಕರೆತಂದಿರುವ ED  ಅಧಿಕಾರಿಗಳು, ಶಂಕಿತ ಉಗ್ರರಿಗೆ ಹಣಕಾಸಿನ ಮೂಲವೇನು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತರ ಮನೆಯವರು, ಅಕ್ಕಪಕ್ಕದವರ ಹಣಕಾಸು ವ್ಯವಹಾರಗಳನ್ನೂ ಪರಿಶೀಲನೆ ನಡೆಸುತ್ತಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ದಡೇಸುಗೂರು ಕಾರು ಡಿಕ್ಕಿ; ವೃದ್ಧೆ ಸಾವು