Webdunia - Bharat's app for daily news and videos

Install App

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

Sampriya
ಮಂಗಳವಾರ, 17 ಜೂನ್ 2025 (15:03 IST)
Photo Credit X
ಬೆಂಗಳೂರು: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿದ ಆರೋಪ ಹೊತ್ತ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ, ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ನೀಡಿದೆ.

ಐಶ್ವರ್ಯ ಗೌಡ ಪ್ರಕರಣದ ತನಿಖೆಯು ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ.  ಈ ಕೇಸ್‌ನಲ್ಲಿ ಈಗಾಗಲೇ ಶಾಸಕ ವಿನಯ್ ಕುಲಕರ್ಣಿ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಬೆನ್ನಲ್ಲೇ ಡಿ.ಕೆ.ಸುರೇಶ್‌ಗೆ ಇ.ಡಿ ಶಾಕ್ ಕೊಟ್ಟಿದೆ. 

ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಕೋಟ್ಯಂತರ ರೂಪಾಯಿ ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಆರೋಪಿ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. 

ಇಡಿ ಅಧಿಕಾರಿಗಳು ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿ.ಕೆ. ಸುರೇಶ್ ಹೇಳಿದ್ದಾರೆ. 

ಡಿ.ಕೆ.ಸುರೇಶ್ ಅವರ​ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚಿಸಿರುವ ಆರೋಪ ಕೇಳಿ ಬಂದಿತ್ತು. ಹೀಗಾಗಿ ಐಶ್ವರ್ಯ ಗೌಡ ಹೇಳಿಕೆ ಹಾಗೂ ಸಾಕ್ಷಿಗಳ ಆಧರಿಸಿ ಮಾಜಿ ಸಂಸದ ಡಿ.ಕೆ.ಸುರೇಶ್​ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸುರೇಶ್‌, ನಾನು ಯಾವುದೇ ವ್ಯವಹಾರ ನಡೆಸಿಲ್ಲ. ಅವರು (ಐಶ್ವರ್ಯಗೌಡ) ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತಾ ಹೇಳಿಕೊಂಡು ಒಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇ.ಡಿಯವರು 7-8 ದಾಖಲೆಗಳನ್ನು ಕೇಳಿದ್ದಾರೆ. ನನ್ನ ಬಳಿ ದಾಖಲೆ ಕೇಳಿದ್ದು ಅಸಂಬದ್ಧ. ಇ.ಡಿ ವಿಚಾರಣೆಗೆ ಹೋದಾಗ ಅಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಶಿಕ್ಷೆ ಪ್ರಮಾಣ ಪ್ರಕಟಿಸಿದ ಮೇಲೆ ಪ್ರಜ್ವಲ್ ರೇವಣ್ಣ ಏನು ಮಾಡಬಹುದು

ಡಾ ಸಿಎನ್ ಮಂಜುನಾಥ್ ಪ್ರಕಾರ ಜೀವನದಲ್ಲಿ ಸಂತೋವಿರಬೇಕಾದರೆ ಈ ಮೂರು ಪದಗಳನ್ನು ಬಿಡಬೇಕು

ಅಮೆರಿಕಾಗೆ ಮಣಿದು ರಷ್ಯಾದಿಂದ ತೈಲ ಖರೀದಿ ನಿಲ್ಲಿಸಿದೆಯಾ ಭಾರತ: ಟ್ರಂಪ್ ಹೇಳಿದ್ದೇನು

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಮುಂದಿನ ಸುದ್ದಿ
Show comments