Publish Date: Fri, 02 Dec 2022 (17:40 IST)
Updated Date: Fri, 02 Dec 2022 (17:42 IST)
ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆಯನ್ನು ಮಾಡದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮುಂದಿನ ಸೂಚನೆಯವರೆಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಮಂಡಿಸದಂತೆ ಎರಡೂ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.