ಚಿಕ್ಕಮಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಸರ್ಕಾರ 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಿದೆ ಎಂದು ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಗುಡ್‌ನ್ಯೂಸ್ ನೀಡಿದ್ದಾರೆ.
ಕೊಪ್ಪ ತಾಲ್ಲೂಕಿನ ಮೆಲ್ಪಾಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹೊಸದಾಗಿ ನಿರ್ಮಿಸಲಾದ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ, 10 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮೊಟ್ಟೆಗಳ ಪೂರೈಕೆಯನ್ನು ವಿಸ್ತರಿಸುವುದರ ಜೊತೆಗೆ, ಶೂ ಮತ್ತು ಸಾಕ್ಸ್‌ಗಳ ಪೂರೈಕೆ ಹಾಗೂ, ಉಚಿತ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳನ್ನು ನೀಡಲಾಗುವುದು ಎಂದರು.
ಇನ್ನೂ ವಿದ್ಯಾರ್ಥಿಗಳ ಪೋಷಣೆಯನ್ನು ಸುಧಾಸುವ ನಿಟ್ಟಿನಲ್ಲಿ ಹಾಲು ಮತ್ತು ರಾಗಿ ಜೊತೆಗೆ ಮೊಟ್ಟೆಗಳನ್ನು ಒದಗಿಸುತ್ತೇವೆ.
ರಾಜ್ಯದಲ್ಲಿ ಸುಮಾರು 57 ಲಕ್ಷ ವಿದ್ಯಾರ್ಥಿಗಳಿಗೆ ಪ್ರಸ್ತುತ ಮಧ್ಯಾಹ್ನದ ಊಟವನ್ನು ನೀಡಲಾಗುತ್ತಿದೆ ಎಂದು ಬಂಗಾರಪ್ಪ ಹೇಳಿದರು.