Publish Date: Sun, 06 Aug 2017 (12:40 IST)
Updated Date: Sun, 06 Aug 2017 (12:42 IST)
ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಸೇರಿದಂತೆ ಪ್ರಮುಖ ನಾಯಕರೇ ಗೈರಾಗಿರವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಮಾವೇಶ ಉದ್ಘಾಟಿಸಿದ್ದಾರೆ. ಆದರೆ ಈಶ್ವರಪ್ಪ ಸೇರಿದಂತೆ ಅವರ ನಿಷ್ಠಾವಂತರು ಗೈರಾಗಿರುವುದು ಮತ್ತೆ ಅಸಮಾಧಾನದ ಅನುಮಾನ ಮೂಡಿಸಿದೆ.
ಸಮಾವೇಶಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್, ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಪ್ರಮುಖ ನಾಯಕರು ಆಗಮಿಸಿದ್ದಾರೆ.