Publish Date: Sat, 19 Aug 2017 (13:15 IST)
Updated Date: Sat, 19 Aug 2017 (13:16 IST)
ರಾಷ್ಟ್ರೀಯ ಪಕ್ಷಗಳು ನಮ್ಮನ್ನು ಹಗುರವಾಗಿ ಕಾಣುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ತರಲು ಯತ್ನ ನಡೆದಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಸರಕಾರವಿದೆ. ಆದರೆ, ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ
ರಾಷ್ಟ್ರೀಯ ಪಕ್ಷಗಳು ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತವೆ. ರಾಜ್ಯಗಳ ಹಿತಾಸಕ್ತಿಯನ್ನು ಗಮನಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಳಸಾ ಬಂಡೂರಿ, ಮಹದಾಯಿ ಯೋಜನೆ ಸೇರಿದಂತೆ ಹಲವಾರು ಯೋಜನೆಗಳು ನೆನೆಗುದಿಗೆ ಬೀಳಲು ರಾಷ್ಟ್ರೀಯ ಪಕ್ಷಗಳೇ ಕಾರಣವಾಗಿವೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಹಿತಾಸಕ್ತಿ ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ನೀರಾವರಿ ಯೋಜನೆಗಳಲ್ಲಿ ರಾಜಕಾರಣ ಮಾಡುವುದು ಬೇಡ. ಇದರಿಂದ ರಾಜ್ಯದ ಜನತೆ ತೀವ್ರ ತೊಂದರೆ ಎದುರಿಸಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.