ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುನಿರತ್ನ ಅವರು ತೆರಳುತ್ತಿದ್ದ ವೇಳೆ ಈ ದಾಳಿ ನಡೆದಿದೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ಘಟನೆ ನಡದಿದೆ. ಕಾಲ್ನಡಿಗೆಯಲ್ಲಿ ಬೆಂಬಲಿಗರ ಜೊತೆ ಸಾಗುತ್ತಿದ್ದ ಮುನಿರತ್ನ ಮೇಲೆ ಯಾರೋ ಮೊಟ್ಟೆ ಎಸೆದಿದ್ದಾರೆ. ಇದು ನೇರವಾಗಿ ಅವರ ತಲೆಗೆ ತಗುಲಿದೆ. ಅದಲ್ಲದೆ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆಯಲಾಗಿದೆ.
ಈ ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.