ಚುನಾವಣಾ ಬಾಂಡ್‌ ಅಕ್ರಮ ಆರೋಪ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ರದ್ದು

Sampriya
ಮಂಗಳವಾರ, 3 ಡಿಸೆಂಬರ್ 2024 (17:57 IST)
ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌, ಬಿಜೆಪಿ ನಾಯಕರ ಮೇಲೆ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಿಜೆಪಿ ನಾಯಕರಿಗೆ ಬಿಗ್‌ ರಿಲೀಫ್ ಸಿಕ್ಕಿದೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್​ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಆದರ್ಶ್‌ ಅಯ್ಯರ್ ಅವರು ಚುನಾವಣಾ ಬಾಂಡ್ ಹೆಸರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧದ ಆರೋಪ ಮಾಡಿ, ದೂರು ದಾಖಲಿಸಿದ್ದರು.

ಇದನ್ನು ರದ್ದುಪಡಿಸುವಂತೆ ನಿರ್ಮಲಾ, ಕಟೀಲ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಇಂದು (ಡಿಸೆಂಬರ್ 03) ಎಫ್​ಐಆರ್​ ರದ್ದುಪಡಿಸಿ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ ಮೂಲಕ ದಾಳಿ ಮಾಡಿಸುವುದಾಗಿ ಬೆದರಿಕೆಯೊಡ್ಡಿ ಪ್ರತಿಷ್ಠಿತ ಕಂಪೆನಿಗಳಿಂದ ಸುಮಾರು 8 ಸಾವಿರ ಕೋಟಿ ರೂ.ಗಳನ್ನು ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿರುವ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ಜಾರಿ ನಿರ್ದೇಶಾನಲಯ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹಾಗೂ ಇತರೆ ಬಿಜೆಪಿ ಮುಖಂಡರ ವಿರುದ್ಧ ಆರ್‌.ಅಯ್ಯರ್‌ ಎಂಬುವರು ಮ್ಯಾಜಿಸ್ಟ್ರೇಟ್ ಕೋರ್ಟ್​​ಗೆ ಖಾಸಗಿ ದೂರು ನೀಡಿದ್ದರು. ಬಳಿಕ ಕೋರ್ಟ್​ ಸೂಚನೆ ಮೇರೆಗೆ ತಿಲಕ್‌ನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments