ನವದೆಹಲಿ: ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಫೈನಲ್ ಮಾಡುವುದರಲ್ಲಿ ಬ್ಯುಸಿಯಾಗಿರುವಾಗಲೇ ಕೇಂದ್ರ ಚುನಾವಣಾ ಆಯೋಗ ಹೊಸ ತಗಾದೆ ತೆಗೆದಿದೆ.
									
			
			 
 			
 
 			
					
			        							
								
																	ಒಬ್ಬನೇ ಅಭ್ಯರ್ಥಿ ಎರಡು ಕಡೆ ಸ್ಪರ್ಧಿಸುವುದಕ್ಕೆ ಕೇಂದ್ರ ಚುನಾವಣಾ ಆಯೋಗ ತಕರಾರರು ತೆಗೆದಿದ್ದು, ಸುಪ್ರೀಂ ಕೋರ್ಟ್ ಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸಿದೆ. ಇದರಂತೆ ಒಬ್ಬನೇ ಸ್ಪರ್ಧಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಆಯೋಗ ಹೇಳಿದೆ.
									
										
								
																	ಆದರೆ ಕರ್ನಾಟಕ ಚುನಾವಣೆಗೆ ಇದು ಪರಿಣಾಮ ಬೀರದು. ಯಾಕೆಂದರೆ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿ ಜುಲೈನಲ್ಲಿ ವಿಚಾರಣೆಗೆ ಬರಲಿದೆ. ಆಗ ರಾಜ್ಯ ಚುನಾವಣೆ ಮುಕ್ತಾಯವಾಗಿರುತ್ತದೆ. ಒಂದಕ್ಕಿಂತ ಹೆಚ್ಚು ಕಡೆ ಒಬ್ಬ ಅಭ್ಯರ್ಥಿ ಸ್ಪರ್ಧಿಸುವುದರಿಂದ ಚುನಾವಣಾ ಆಯೋಗಕ್ಕೆ ವೆಚ್ಚ ಹೆಚ್ಚು ತಗಲುತ್ತದೆ ಎಂದು ಈ ತಕರಾರರು ತೆಗೆಯಲಾಗಿದೆ.
									
											
							                     
							
							
			        							
								
																	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ