Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಆರೋಪಿಸಿದಂತೆ ಮತ ಡಿಲೀಟ್ ಮಾಡಲು ಸಾಧ್ಯವಿಲ್ಲ: ಚುನಾವಣಾ ಆಯೋಗ

Rahul Gandhi

Krishnaveni K

ನವದೆಹಲಿ , ಗುರುವಾರ, 18 ಸೆಪ್ಟಂಬರ್ 2025 (13:45 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದಂತೆ ಆನ್ ಲೈನ್ ನಲ್ಲಿ ಮತದಾರರ ಹೆಸರು ಡಿಲೀಟ್ ಮಾಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ಮತ್ತಷ್ಟು ಆರೋಪ ಮಾಡಿದ್ದರು. ದಲಿತರು, ಬುಡಕಟ್ಟು ಜನಾಂಗದವರು ಸೇರಿದಂತೆ ಕಾಂಗ್ರೆಸ್ ಗೆ ವೋಟ್ ಹಾಕುವವರ ಹೆಸರುಗಳನ್ನೇ ಡಿಲೀಟ್ ಮಾಡಲಾಗಿದೆ ಎಂದಿದ್ದಾರೆ.

ಇದಕ್ಕೆ ಕರ್ನಾಟಕ ಆಳಂದ ಕ್ಷೇತ್ರದ ಉದಾಹರಣೆಯನ್ನೂ ನೀಡಿದ್ದಾರೆ. ಇಲ್ಲಿ 6,018 ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಈಗ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಒಬ್ಬ ವ್ಯಕ್ತಿಗೆ ಅಭಿಪ್ರಾಯ ತಿಳಿಸಲು ಅವಕಾಶ ನೀಡದೇ ಯಾವುದೇ ಮತದಾರರ ಹೆಸರು ಡಿಲೀಟ್ ಮಾಡಲು ಅವಕಾಶವಿಲ್ಲ. ಮತದಾರರ ಹೆಸರನ್ನು ಆನ್ ಲೈನ್ ಮೂಲಕ ಡಿಲೀಟ್ ಮಾಡಲು ಸಾಧ್ಯವಿಲ್ಲ. ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಯತ್ನಗಳು ನಡೆದಿದ್ದವು. ಇದರ ಬಗ್ಗೆ ಚುನಾವಣಾ ಆಯೋಗವೇ ಎಫ್ಐಆರ್ ದಾಖಲಿಸಿತ್ತು. ರಾಹುಲ್ ಗಾಂಧಿ ಈಗ ಆರೋಪಿಸುತ್ತಿರುವುದೆಲ್ಲವೂ ಸತ್ಯಕ್ಕೆ ದೂರವಾದುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಗೆ ವೋಟ್ ಹಾಕುವವರ ಹೆಸರನ್ನೇ ಮತಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ: ರಾಹುಲ್ ಗಾಂಧಿ ಆರೋಪ