ರಾಹುಲ್ ಗಾಂಧಿ ಆರೋಪಿಸಿದಂತೆ ಮತ ಡಿಲೀಟ್ ಮಾಡಲು ಸಾಧ್ಯವಿಲ್ಲ: ಚುನಾವಣಾ ಆಯೋಗ

Krishnaveni K
ಗುರುವಾರ, 18 ಸೆಪ್ಟಂಬರ್ 2025 (13:45 IST)
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದಂತೆ ಆನ್ ಲೈನ್ ನಲ್ಲಿ ಮತದಾರರ ಹೆಸರು ಡಿಲೀಟ್ ಮಾಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನದ ಬಗ್ಗೆ ಮತ್ತಷ್ಟು ಆರೋಪ ಮಾಡಿದ್ದರು. ದಲಿತರು, ಬುಡಕಟ್ಟು ಜನಾಂಗದವರು ಸೇರಿದಂತೆ ಕಾಂಗ್ರೆಸ್ ಗೆ ವೋಟ್ ಹಾಕುವವರ ಹೆಸರುಗಳನ್ನೇ ಡಿಲೀಟ್ ಮಾಡಲಾಗಿದೆ ಎಂದಿದ್ದಾರೆ.

ಇದಕ್ಕೆ ಕರ್ನಾಟಕ ಆಳಂದ ಕ್ಷೇತ್ರದ ಉದಾಹರಣೆಯನ್ನೂ ನೀಡಿದ್ದಾರೆ. ಇಲ್ಲಿ 6,018 ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ಈಗ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಒಬ್ಬ ವ್ಯಕ್ತಿಗೆ ಅಭಿಪ್ರಾಯ ತಿಳಿಸಲು ಅವಕಾಶ ನೀಡದೇ ಯಾವುದೇ ಮತದಾರರ ಹೆಸರು ಡಿಲೀಟ್ ಮಾಡಲು ಅವಕಾಶವಿಲ್ಲ. ಮತದಾರರ ಹೆಸರನ್ನು ಆನ್ ಲೈನ್ ಮೂಲಕ ಡಿಲೀಟ್ ಮಾಡಲು ಸಾಧ್ಯವಿಲ್ಲ. ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳನ್ನು ಅಳಿಸಲು ಕೆಲವು ವಿಫಲ ಯತ್ನಗಳು ನಡೆದಿದ್ದವು. ಇದರ ಬಗ್ಗೆ ಚುನಾವಣಾ ಆಯೋಗವೇ ಎಫ್ಐಆರ್ ದಾಖಲಿಸಿತ್ತು. ರಾಹುಲ್ ಗಾಂಧಿ ಈಗ ಆರೋಪಿಸುತ್ತಿರುವುದೆಲ್ಲವೂ ಸತ್ಯಕ್ಕೆ ದೂರವಾದುದು ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಡ್ಡಿ ಬಾಯ್ ಪ್ರಿಯಾಂಕ್ ಖರ್ಗೆ,ಅಸ್ಸಾಂ ಅಲ್ಲ ನಿನ್ನ ಕ್ಷೇತ್ರದ ಸಮಸ್ಯೆ ನೋಡ್ಕೋ: ಅಸ್ಸಾಂ ಬಿಜೆಪಿ

ಟನೆಲ್ ರೋಡ್ ಅತ್ಲಾಗಿ ಇರಲಿ ಸ್ವಾಮಿ, ಮೊದಲು ಸಂಬಳ ಕೊಡಿ: ಆರ್ ಅಶೋಕ್

ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸಿದ್ರೆ ಕರಾವಳಿ ಹೊತ್ತಿ ಉರಿಯುತ್ತದೆ: ಪೋಸ್ಟ್ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಂಧ್ರ ಸಚಿವ, ಆರ್ ಎಸ್ಎಸ್ ಆಯ್ತು, ಈಗ ಅಸ್ಸಾಂ ಸಿಎಂ ಜೊತೆ ಪ್ರಿಯಾಂಕ್ ಖರ್ಗೆ ಜಟಾಪಟಿ: ನೆಟ್ಟಿಗರು ಹೇಳಿದ್ದೇನು

ಮುಂದಿನ ಸುದ್ದಿ
Show comments