Webdunia - Bharat's app for daily news and videos

Install App

ನಿಮಗೆ 18 ವರ್ಷ ಈಗಷ್ಟೇ ಆಗಿದೆಯೇ? ಹಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

Krishnaveni K
ಶುಕ್ರವಾರ, 12 ಏಪ್ರಿಲ್ 2024 (09:54 IST)
ಬೆಂಗಳೂರು: ನಿಮಗೆ ಈಗಷ್ಟೇ 18 ವರ್ಷ ತುಂಬಿದೆಯೇ? ಹಾಗಿದ್ದರೆ ನಿಮಗೆ ಗುಡ್ ನ್ಯೂಸ್ ಕಾದಿದೆ. ಚುನಾವಣಾ ಆಯೋಗ ನಿಮಗೂ ಮತದಾನದ ಅವಕಾಶ ನೀಡಲಿದೆ.

ಇತ್ತೀಚೆಗಷ್ಟೇ 18 ವರ್ಷ ತುಂಬಿದ ಸುಮಾರು 70 ಸಾವಿರ ಮಂದಿ ರಾಜ್ಯದಲ್ಲಿದ್ದಾರೆ. ಅವರೆಲ್ಲರಿಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡಲಾಗುವುದು ಎಂದು ಚುನಾವಣಾ ಆಯೋಗದ ಮುಖ್ಯಸ್ಥ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಈಗಷ್ಟೇ 18 ವರ್ಷ ತುಂಬಿದವರು ಮತದಾರರ ಗುರುತಿನ ಚೀಟಿ ಮಾಡಿಸಿಕೊಂಡು ಈ ಬಾರಿಯೇ ಮೊದಲ ಬಾರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ. ಫಾರ್ಮ್ 6 ರ ನಿಬಂಧನೆಯ ಅಡಿಯಲ್ಲಿ ಈ ಅನುಕೂಲ ಮಾಡಿಕೊಡಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.

ಹೀಗಾಗಿ ಈ ಬಾರಿ ಹೊಸದಾಗಿ ಮತ್ತಷ್ಟು ಮಂದಿ ಮತದಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ದಕ್ಷಿಣದ ಭಾಗಗಳಲ್ಲಿ ಏಪ್ರಿಲ್ 26 ರಂದು ಮತ್ತು ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments