Select Your Language

Notifications

webdunia
webdunia
webdunia
webdunia

ಎಲೆಕ್ಷನ್ ಎಫೆಕ್ಟ್: ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ಹಣ ವಶ

ಎಲೆಕ್ಷನ್ ಎಫೆಕ್ಟ್: ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ಹಣ ವಶ
ಹುಣಸೂರು , ಗುರುವಾರ, 21 ಮಾರ್ಚ್ 2019 (17:39 IST)
ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ತಪಾಸಣೆ ಕೈಗೊಂಡ ಅಧಿಕಾರಿಗಳಿಗೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಣಸೂರು ತಾಲ್ಲೂಕು ಗಾವಡಗೆರೆ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.4 ಲಕ್ಷ ಹಣವನ್ನು ವಶಪಡಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ. 

ಹುಣಸೂರು ಉಪ ವಿಭಾಗಾಧಿಕಾರಿ ಹೆಚ್.ಜಿ.ಚಂದ್ರಶೇಖರಯ್ಯ, ತಹಶೀಲ್ದಾರ್ ಬಸವರಾಜು, ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿ ಕೃಷ್ಣಕುಮಾರ್, ಸೆಕ್ಟರ್ ಮ್ಯಾಜಿಸ್ಟ್ರೇಟ್ ಪ್ರಕಾಶ್, ಕುಮಾರ್, ಮುಖ್ಯಪೇದೆ ರಮೇಶ್ ಅವರು ಈ ತಪಾಸಣಾ ಕಾರ್ಯಾಚರಣೆ ನಡೆಸಿದರು. ವಶಪಡಿಸಿಕೊಂಡ ಹಣ ಯಾವು ಉದ್ದೇಶಕ್ಕೆ ತೆಗೆದುಕೊಂಡು ಹೋಗಲಾಗುತ್ತಿತ್ತು ಎಂಬುದರ ಮೂಲ ತಿಳಿಯಲು ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಬಗ್ಗೆ ಹೀನಾಯವಾಗಿ ಮಾತನಾಡಿದ ಶಾಸಕನಿಗೆ ಬಿಸಿ ಮುಟ್ಟಿಸಿದ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ