Select Your Language

Notifications

webdunia
webdunia
webdunia
webdunia

ಅ.17ಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಅ.17ಕ್ಕೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆ ಆಗಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19ರಂದು ಮತ ಎಣಿಕೆಯಾಗಿ ಹೊಸ ಅಧ್ಯಕ್ಷರ ಘೋಷಣೆ ಆಗಲಿದೆ. ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚುನಾವಣಾ ವೇಳಾಪಟ್ಟಿಗೆ ಅನುಮೋದನೆ ಸಿಕ್ಕ ಬಳಿಕ ಮಾಧ್ಯಮಗಳಿಗೆ ಅದನ್ನು ಪ್ರಕಟಿಸಲಾಗಿದೆ. ಆ ವೇಳಾಪಟ್ಟಿ ಪ್ರಕಾರ ಸೆಪ್ಟೆಂಬರ್ 24ರಿಂದ 30ರವರೆಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಅಕ್ಟೋಬರ್ 1ರಂದು ನಾಮಪತ್ರ ಪರಿಶೀಲನೆ ಆಗಲಿದ್ದು, ನವೆಂಬರ್ 8ರವರೆಗೂ ನಾಮಪತ್ರ ವಾಪಸ್ ಪಡೆದುಕೊಳ್ಳಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 17ರಂದು ಮತದಾನವಾದರೆ, 19ರಂದು ಮತ ಎಣಿಕೆಯಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ವಿರುದ್ಧ ವಾಗ್ದಾಳಿ ನೆಡೆಸಿದ ರಣದೀಪ್ ಸಿಂಗ್ ಸುರ್ಜೇವಾಲಾ