ಇಂದು ಮೇಯರ್, ಉಪಮೇಯರ್ ಸ್ಥಾನಕ್ಕೆ ಚುನಾವಣೆ

Webdunia
ಮಂಗಳವಾರ, 20 ಜೂನ್ 2023 (08:43 IST)
ಧಾರವಾಡ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಜೂನ್ 20ರಂದು ಚುನಾವಣೆ ನಡೆಯಲಿದೆ.
 
ಧಾರವಾಡ  ಪಾಲಿಕೆಯ ಸ್ವಾತಂತ್ರ್ಯ ಅಮೃತಮಹೋತ್ಸವ ಸಭಾಭವನದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಯಲಿದೆ.

22ನೇ ಅವಧಿಯ ಹು-ಧಾ ಪಾಲಿಕೆ ಚುನಾವಣೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿದೆ. 

82 ಸದಸ್ಯರ ಬಲಾಬಲ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 39 ಮಂದಿ ಬಿಜೆಪಿ ಸದಸ್ಯರು, 33 ಮಂದಿ ಕಾಂಗ್ರೆಸ್ ಸದಸ್ಯರು, AIMIM 3, ಜೆಡಿಎಸ್ 1 ಹಾಗೂ 6 ಪಕ್ಷೇತರ ಸದಸ್ಯರು ಇದ್ದಾರೆ. ಸಂಸದ, ಶಾಸಕರು, ಪರಿಷತ್ ಸದಸ್ಯರು ಸೇರಿ ಒಟ್ಟು ಸದಸ್ಯರ ಬಲ 91 ಇದೆ. ಅಡ್ಡಮತದಾನ ಮಾಡಬಹುದೆಂಬ ಕಾರಣಕ್ಕೆ ಉಭಯ ಪಕ್ಷದ ಅಧ್ಯಕ್ಷರಿಂದ ವಿಪ್ ಜಾರಿ ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments