Daily Horoscope
✕

ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ : ಬೊಮ್ಮಾಯಿ

Webdunia
ಗುರುವಾರ, 24 ಮಾರ್ಚ್ 2022 (07:56 IST)
ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ, ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂಬುದು ಒಮ್ಮತದ ತೀರ್ಮಾನವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನಡೆದ ಸರ್ವಪಕ್ಷಗಳ ನಾಯಕರ ಸಭೆಯ ನಂತರ ಮಾಧ್ಯಮದವರೊಂದಿಗೆ ಬೊಮ್ಮಾಯಿ ಅವರು  ಮಾತನಾಡಿದರು.

ಈ ವೇಳೆ ಅವರು, ಎಲ್ಲ ಆಯಾಮಗಳಲ್ಲಿ ವಿಚಾರ ಮಾಡಿ ಹಿಂದುಳಿದ ವರ್ಗಗಳಿಗೆ ರಾಜಕೀಯವಾಗಿ ಹಿಂದುಳಿದಿರುವುದನ್ನು ಗುರುತಿಸಬೇಕು. ಅದಕ್ಕಾಗಿ ಸಮಿತಿ ರಚಿಸಬೇಕು.

ಒಟ್ಟಾರೆ ಮೀಸಲಾತಿ ಶೇ 50% ನ್ನು ಮೀರಬಾರದು ಎನ್ನುವ ಸರ್ವೋಚ್ಚ ನ್ಯಾಯಾಲಯದ ಷರತ್ತುಗಳನ್ವಯ ಕ್ರಮಗಳನ್ನು ತೆಗೆದು ಕೊಳ್ಳಲಾಗುವುದು ಎಂದು ಹೇಳಿದರು. 

ಈ ತಿಂಗಳ ಅಂತ್ಯದೊಳಗೆ ಮುಂದಿನ ಸಭೆ ನಿಗದಿಪಡಿಸಲಾಗುವುದು. ಆ ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಹಾಜರಾತಿಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಈ ಕುರಿತು ಆಯೋಗ ರಚಿಸಿ ವರದಿ ಪಡೆದು ಚುನಾವಣೆಗೆ ಹೋಗಬೇಕೆ ಅಥವಾ ಸರ್ವೋಚ್ಚ ನ್ಯಾಯಾಲಯದಲ್ಲಿ ಪುನರ್ ಪರಿಶೀಲನಾ ಅರ್ಜಿ ಹಾಕಬೇಕೆ ಎನ್ನುವ ಆಯ್ಕೆ ನಮ್ಮ ಮುಂದಿದೆ. ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡದೆ ಚುನಾವಣೆಗೆ ಹೋಗಲು ಸಾಧ್ಯವಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments