Select Your Language

Notifications

webdunia
webdunia
webdunia
webdunia

ಚುನಾವಣಾ ಪ್ರಣಾಳಿಕೆ ರಾಜಕೀಯ ಪಕ್ಷಗಳಿಗೆ ಬೈಬಲ್ ಇದ್ದ ಹಾಗೆ : ಮಹದೇವಪ್ಪ

ಚುನಾವಣಾ ಪ್ರಣಾಳಿಕೆ ರಾಜಕೀಯ ಪಕ್ಷಗಳಿಗೆ ಬೈಬಲ್ ಇದ್ದ ಹಾಗೆ : ಮಹದೇವಪ್ಪ
ಮೈಸೂರು , ಮಂಗಳವಾರ, 30 ಮೇ 2023 (08:57 IST)
ಮೈಸೂರು : ಚುನಾವಣಾ ಪ್ರಣಾಳಿಕೆ ರಾಜಕೀಯ ಪಕ್ಷಗಳಿಗೆ ಬೈಬಲ್ ಇದ್ದ ಹಾಗೆ ಎಂದು ನೂತನ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೊಟ್ಟ ಭರವಸೆಗಳನ್ನು ಸಿದ್ದರಾಮಯ್ಯ ನೆರೆವೇರಿಸಿದ್ದಾರೆ. ನುಡಿದಂತೆ ನಡೆದಿದ್ದೇವೆ. ಚುನಾವಣಾ ಪ್ರಣಾಳಿಕೆಯಲ್ಲಿ ಇಲ್ಲದ ಭರವಸೆ ಸೇರಿದಂತೆ ರೈತರಿಗೆ ಸಾಕಷ್ಟು ಸಹಾಯ ಮಾಡಿದೆ. ಕಾಂಗ್ರೆಸ್ ನುಡಿದಂತೆ ನಡೆಯುವ ಪಕ್ಷ. 5 ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಅದರಿಂದ ಹಿಂದೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಬಿಜೆಪಿ ಪ್ರತಿಯೊಬ್ಬರಿಗೆ 15 ಲಕ್ಷ ರೂ. ಹಾಗೂ ಉದ್ಯೋಗ ಕೊಡುತ್ತೇವೆ ಎಂದು ಹೇಳಿದ್ದರು. ಅದನ್ನು ನೆರವೇರಿಸಿಲ್ಲ. ನಾವು ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಗ್ಯಾರಂಟಿ ಜಾರಿ ಮಾಡಿಯೇ ಮಾಡುತ್ತೇವೆ. ಜುಲೈನಲ್ಲಿ ಬಜೆಟ್ ಮಾಡುತ್ತೇವೆ.

5 ಗ್ಯಾರಂಟಿ ಕೊಡಲು ಎಲ್ಲಾ ಇಲಾಖೆಗಳಲ್ಲಿ ಹಣವನ್ನು ಹೊಂದಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನ ಹಾಗೇ ನಡೆದುಕೊಳ್ಳುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ಯಾಸಿನ್ ಮಲಿಕ್ಗೆ ಹೈಕೋರ್ಟ್ ನೋಟಿಸ್