ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯಾರಾಗಬೇಕು ಎಂಬುದರ ಬಗ್ಗೆ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ವಿಧಾನಸಭಾ ಚುನಾವಣೆಯ ಫಲಿತಾಂಶದ ಪರಾಮರ್ಶೆ ಕುರಿತ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅರುಣ್ ಸಿಂಗ್ ಅವರು ಕೆಲವು ಶಾಸಕರಿಂದ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇನ್ನು 66 ಶಾಸಕರನ್ನೂ ಕರೆದು ಅಭಿಪ್ರಾಯ ಸಂಗ್ರಹಿಸಿಲ್ಲ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು.ನಿಮ್ಮ ನಾಯಕ ಯಾರಾಗಬೇಕು ಎಂಬ ಬಗ್ಗೆ ಯಾವುದೇ ನಿರ್ದಿಷ್ಟಅಭಿಪ್ರಾಯಗಳಿದ್ದಲ್ಲಿ ಸಭೆಯ ಬಳಿಕ ಅರುಣ್ ಸಿಂಗ್ ಅವರಿಗೆ ತಿಳಿಸಬಹುದು ಎಂದರು. ಸಭೆಯ ಬಳಿಕ ಕೆಲವು ಶಾಸಕರು ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.