Select Your Language

Notifications

webdunia
webdunia
webdunia
webdunia

ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ: ಬೊಮ್ಮಾಯಿ

ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲಿದೆ: ಬೊಮ್ಮಾಯಿ
ಬೆಂಗಳೂರು , ಮಂಗಳವಾರ, 6 ಡಿಸೆಂಬರ್ 2022 (13:13 IST)
ಬೆಂಗಳೂರು : 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಜಯ ಎಂಬ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜನರು ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸಲಿದ್ದಾರೆ. ಜನರು ಸುಳ್ಳು ಆರೋಪಗಳು ಹಾಗೂ ರಾಜಕೀಯ ಆರೋಪಗಳಿಗೆ ಬೆಲೆ ಕೊಡುವುದಿಲ್ಲ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. 

ಎರಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಇಡೀ ಭಾರತ, ವಿಶ್ವ ಬೆಂಬಲ ಕೊಡುತ್ತಿದೆ. ಹೀಗಾಗಿ ಗುಜರಾತ್ನಲ್ಲಿ 7ನೇ ಬಾರಿ ಗೆಲುವು ಸಾಧಿಸುತ್ತಿದ್ದೇವೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ