Publish Date: Thu, 06 Aug 2020 (15:45 IST)
Updated Date: Thu, 06 Aug 2020 (15:48 IST)
ರಾಜ್ಯದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಿದ್ಧಗೊಳ್ಳುತ್ತಿದೆ.
ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದಿಂದ ಚುನಾವಣೆ ನಡೆಸಲು ಮತದಾರರ ಪಟ್ಟಿ ಪರಿಷ್ಕರಣೆಗೆ ಪರಿಷ್ಕೃತ ವೇಳಾಪಟ್ಟಿಯಂತೆ 2020 ರ ಜನವರಿ 16 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪ್ರಸ್ತುತ ಮತದಾರರ ಪಟ್ಟಿಯ ನಿರಂತರ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿರುತ್ತದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ಕರ್ನಾಟಕ ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು 2019 ರ ನವೆಂಬರ್ 01 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು 2019ರ ಆಕ್ವೋಬರ್ 01 ರಿಂದ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ನೊಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತಾ ದಿನಾಂಕದಿಂದ ಮೂರು ವರ್ಷಗಳ ಹಿಂದೆ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವವರು ಹಾಗೂ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ವಾಸಿಯಾಗಿರುವವರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಹರಾಗಿರುತ್ತಾರೆ.