Select Your Language

Notifications

webdunia
webdunia
webdunia
webdunia

ಜೂನ್‌ನಲ್ಲಿ ರಾಜ್ಯದ ಸ್ಥಳೀಯ ಸರ್ಕಾರಗಳ ಚುನಾವಣೆ

ಜೂನ್‌ನಲ್ಲಿ ರಾಜ್ಯದ ಸ್ಥಳೀಯ ಸರ್ಕಾರಗಳ ಚುನಾವಣೆ
ಬೆಂಗಳೂರು , ಸೋಮವಾರ, 4 ಮೇ 2015 (16:45 IST)
ಇತ್ತೀಚೆಗೆ ನೂತನವಾಗಿ ಜಾರಿಗೆ ತಂದಿರುವ ನೂತನ ಪಂಚಾಯತ್ ರಾಜ್ ಅಧಿನಿಯಮದ ಆಧಾರವಾಗಿಯೇ ಸ್ಥಳೀಯ ಸರ್ಕಾರದ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇನ್ನೆರಡು ದಿನಗಳ ಒಳಗೆ ಮೀಸಲಾತಿ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಸರ್ಕಾರದ ಪಂಚಾಯತ್ ರಾಜ್ ಇಲಾಖೆಯ ಮಾಹಿತಿಗಳ ಪ್ರಕಾರ, ಮುಂದೆ ನಡೆಯಲಿರುವ ಸ್ಥಳೀಯ ಸರ್ಕಾರಗಳ ಚುನಾವಣೆಗೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ಮೀಸಲಾತಿ ಪಟ್ಟಿಯನ್ನು ಸಿದ್ಧಪಡಿಸಿ ಘೋಷಣೆ ಮಾಡಲಿದ್ದು, ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಘೋಷಿಸಲು ನಿರ್ಧರಿಸಲಾಗಿದೆ ಎಂಬ ವಿಷಯ ತಿಳಿದು ಬಂದಿದೆ.

ಇನ್ನು ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಶೀಘ್ರದಲ್ಲಿಯೇ ಅಧಿಸೂಚನೆ ಹೊರಡಿಸಲಿದೆ ಎನ್ನಲಾಗುತ್ತಿದೆ. ಅಲ್ಲದೆ ಜೂನ್ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯೂ ಇದೆ.

Share this Story:

Follow Webdunia kannada